ಯಾದಗಿರಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕಾರ್ಯ ನಿರ್ವಹಿಸುವ 4 ಶಿಶು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿಯರ ಸೇವೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಈ ಕೂಡಲೇ ಸಲ್ಲಿಸಬಹುದು.
ಹುದ್ದೆಯ ಹೆಸರು/ಸಂಖ್ಯೆ
ಅಂಗನವಾಡಿ ಕಾರ್ಯಕರ್ತೆ-13
ಅಂಗನವಾಡಿ ಸಹಾಯಕಿ-34
ಹುದ್ದೆಗಳು ಯಾದಗಿರಿಯಲ್ಲಿದ್ದು ಅಲ್ಲಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 7,ಮಾರ್ಚ್ 2021
ಆಸಿಡ್ ದಾಳಿಗೊಳಗಾದ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಮೊದಲು ಅವರಿಗೆ ಆದ್ಯತೆ ನೀಡಲಾಗುವುದು ಮತ್ತು ನೇರವಾಗಿ ಹುದ್ದೆಗೆ ಆಯ್ಕೆ ಮಾಡಲಾಗುವುದು.
ವಿದ್ಯಾಭ್ಯಾಸ
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸುವ ಮಹಿಳಾ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ಪಾಸಾಗಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಕನಿಷ್ಠ 4 ನೇ ತರಗತಿ ಗರಿಷ್ಠ 9 ನೇ ತರಗತಿ ತೇರ್ಗಡೆಯಾಗಿರಬೇಕು.
ವಯೋಮಿತಿ
ವಿಕಲಚೇತನ ಅಭ್ಯರ್ಥಿಗಳಿಗೆ ಕನಿಷ್ಠ 10 ವರ್ಷ ಸಡಿಲಿಕೆ ಇರುತ್ತದೆ. ಉಳಿದವರಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವಯಸ್ಸಾಗಿರಬೇಕು.
ಅರ್ಜಿ ಶುಲ್ಕ
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿಸುವಂತಿಲ್ಲ.
ಅರ್ಜಿಗಳನ್ನು ಆನ್ ಲೈನ್ ಮುಖಾಂತರ ಮಾತ್ರ ಸಲ್ಲಿಸಲು ಅವಕಾಶವಿದ್ದು, ಅಂಚೆ ಅಥವಾ ಖುದ್ದಾಗಿ ಸಲ್ಲಿಸಲು ಅವಕಾಶವಿಲ್ಲ. ಅಂತಹ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ https://anganawadirecruit.kar.nic.in ಹೋಗಿ ಅಧಿಸೂಚನೆಯನ್ನು ಓದಿ ಹುದ್ದೆಗಳಿಗೆ ಕೇಳಲಾಗಿರುವ ಮಾಹಿತಿಗಳನ್ನು ಭರ್ತಿ ಮಾಡಬೇಕು.