Yadgir District Court Recruitment 2024: ಯಾದಗಿರಿ ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಜವಾನ, ಬೆರಳಚ್ಚುಗಾರರು, ಶೀಘ್ರ ಲಿಪಿಗಾರರು ಗ್ರೇಡ್3 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಕೃತ ಜಾಲತಾಣದ ಮೂಲಕ ನಿಗದಿ ಪಡಿಸಿದ ದಿನಾಂಕದ ಒಳಗಾಗಿ ಸಲ್ಲಿತಕ್ಕದ್ದು. ಆನ್‌ಲೈನ್ ಹೊರತುಪಡಿಸಿ ಖುದ್ದಾಗಿ, ಅಂಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸಿದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಪ್ರಮುಖ ದಿನಾಂಕಗಳು
ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಆರಂಭಿಕ ದಿನಾಂಕ; 16-01-2024
ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ: 15-02-2024 (ರಾತ್ರಿ 11.59 ಗಂಟೆಯವರೆಗೆ)
ಶುಲ್ಕ ಪಾವತಿ ಮಾಡಲು ಕಡೆಯ ದಿನಾಂಕ; 16-02-2024
ಹುದ್ದೆಗಳ ವಿವರ: ಜವಾನ ಹುದ್ದೆ-24, ಬೆರಳಚ್ಚುಗಾರರು ಹುದ್ದೆ-05 ಹುದ್ದೆ, ಶೀಘ್ರಲಿಪಿಗಾರರು ಗ್ರೇಡ್ 3-01 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ವೇತನ ಶ್ರೇಣಿ: ಶೀಘ್ರಲಿಪಿಗಾರ ಗ್ರೇಡ್ 3 ವೇತನ: ರೂ.27,650-52,650 ಹಾಗೂ ವಿಶೇಷ ಭತ್ಯೆ, ಬೆರಳಚ್ಚುಗಾರರ ವೇತನ: ರೂ.21,400-42,000 ಹಾಗೂ ವಿಶೇಷ ಭತ್ಯೆ, ಜವಾನ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.17000-28950ರೂ. ಹಾಗೂ ವಿಶೇಷ ಭತ್ಯೆ ದೊರಕಲಿದೆ.
ವಿದ್ಯಾರ್ಹತೆ: ಶೀಘ್ರಲಿಪಿಗಾರ ಗ್ರೇಡ್ 3 ಹುದ್ದೆಗೆ ಅರ್ಜಿ ಸಲ್ಲಿಸಲು ನಿಗದಿ ಪಡಿಸಿದ ಕಡೆಯ ದಿನಾಂಕದ ಒಳಗಾಗಿ ಅಭ್ಯರ್ಥಿಗಳು ದ್ವಿತೀಯ ಪಿಯುಸಿ ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಮತ್ತು ಕನ್ನಡ, ಇಂಗ್ಲೀಷ್ ಎರಡೂ ಭಾಷೆಗಳಲ್ಲಿ ಹಿರಿಯ ಶ್ರೇಣಿ ಶೀಘ್ರಲಿಪಿ ಮತ್ತು ಬೆರಳಚ್ಚು ಅಥವಾ ಡಿಪ್ಲೋಮಾ ವಾಣಿಜ್ಯ ಪರೀಕ್ಷೆ ತೇರ್ಗಡೆ ಹೊಂದಿರಬೇಕು.
ಬೆರಳಚ್ಚುಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ದ್ವಿತೀಯ ಪಿಯುಸಿ, ಅಥವಾ ಮೂರು ವರ್ಷದ ಡಿಪ್ಲೋಮಾ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ: ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು. ಗರಿಷ್ಠ ವಯೋಮಿತಿ ಈ ಕೆಳಗಿನಂತೆ ನೀಡಲಾಗಿದೆ.
ಸಾಮಾನ್ಯ ವರ್ಗ 35 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿ 38 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 40 ವರ್ಷ
ವಿಧವೆಯರು, ಅಂಗವಿಕಲರಿಗೆ ಗರಿಷ್ಠ 10 ವರ್ಷ, ಮಾಜಿ ಸೈನಿಕರಿಗೆ ಸಶಸ್ತ್ರ ದಳಗಳಲ್ಲಿ ಸೇವೆ ಸಲ್ಲಿಸಿರುವಷ್ಟು ವರ್ಷಗಳಿಗೆ ಮೂರು ವರ್ಷಗಳನ್ನು ಸೇರಿಸಿದರೆ ಎಷ್ಟು ವರ್ಷಗಳಾವುದುಓ ಅಷ್ಟು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
ಅರ್ಜಿ ಶುಲ್ಕ: ಸಾಮಾನ್ಯ ಅಭ್ಯರ್ಥಿಗಳಿಗೆ ರೂ.200, ಪ್ರವರ್ಗ-2ಎ/2ಬಿ/3ಎ/2ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.100, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ.
ಅರ್ಜಿ ಶುಲ್ಕವನ್ನು ಸ್ಟೇಟ್‌ಬ್ಯಾಂಕ್ ಇಂಡಿಯಾದ State Bank Collect ಮೂಲಕ ಆನ್‌ಲೈನ್ ನೆಟ್‌ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಡೆಬಿಟ್ ಕಾರ್ಡ್/ಯುಪಿಐ ಯಾವುದಾದರೂ ಒಂದು ಸೌಲಭ್ಯದ ಮೂಲಕ ಪಾವತಿ ಮಾಡತಕ್ಕದ್ದು.
ಆಯ್ಕೆ ವಿಧಾನ: ಶೀಘ್ರಲಿಪಿಗಾರರ ಹುದ್ದೆಯ ಆಯ್ಕೆ: ಅಭ್ಯರ್ಥಿಗಳಿಗೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಪ್ರತಿ ನಿಮಿಷಕ್ಕೆ 120 ಪದಗಳ ವೇಗದಂತೆ ನಿಮಿಷಗಳ ಉಕ್ತಲೇಖನ ನೀಡಿ ನಂತರ 45 ನಿಮಿಷಗಳ ಅವಧಿಯಲ್ಲಿ ಬೆರಳ್ಳುಯಂತ್ರ/ಗಣಕಯಂತ್ರದ ಮೇಲೆ ಲಿಪ್ಯಂತರ ಮಾಡಲು ಹೇಳಲಾಗುವುದು.
ಬೆರಳಚ್ಚುಗಾರರ ಹುದ್ದೆಯ ಆಯ್ಕೆ ವಿಧಾನ: ಅಭ್ಯರ್ಥಿಗಳಿಗೆ ಕನ್ನಡ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ 15 ನಿಮಿಷಗಳ ಅರ್ಹತಾ ಪರೀಕ್ಷೆಯನ್ನು ಬೆರಳಚ್ಚು ಯಂತ್ರ/ಗಣಕಯಂತ್ರದ ಮೇಲೆ ಬೆರಳಚ್ಚು ಮಾಡಲು ಹೇಳಲಾಗುವುದು.
ಜವಾನ ಹುದ್ದೆಯ ಆಯ್ಕೆ : ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ (1:10 ರ ಅನುಪಾತದಲ್ಲಿ) ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.