ಮೈಸೂರು ಜಿಲ್ಲೆಯಲ್ಲಿ ಯುವ ಪರಿವರ್ತಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನಾರೋಗ್ಯ ಸಂಸ್ಥೆ, ನಿಮ್ಹಾನ್ಸ್‌ನ ಎಪಿಡಿಯಾಮಾಲಜಿ ವಿಭಾಗ ಸಹಯೋಗದಲ್ಲಿ ಅನುಷ್ಠಾನಗೊಳ್ಳುತ್ತಿರುವ ಹಾಗೂ ರಾಜ್ಯ ಸರಕಾರದ ಅನುದಾನಿತ ಯೋಜನೆಯಾದ “ಯುವಜನರ ಮಾನಸಿಕ ಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ’ ಮತ್ತು’ ಅನುಷ್ಠಾನ ಯೋಜನೆ’ ಯಡಿಯಲ್ಲಿ ಯುವ ಪರಿವರ್ತಕರಾಗಿ ಕಾರ್ಯ ನಿರ್ವಹಿಸಲು ಅರ್ಜಿ ಆಹ್ವಾನಿಸಲಾಗಿದೆ.
ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 35 ವರ್ಷದೊಳಗಿರಬೇಕು.
ವಿದ್ಯಾರ್ಹತೆ : ಪದವಿ ಹಾಗೂ ಮೇಲ್ಪಟ್ಟು ವಿದ್ಯಾಭ್ಯಾಸ ಮಾಡಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಇತರೆ ಅನುಭವ : ಕನ್ನಡವನ್ನು ಸ್ಪಷ್ಟವಾಗಿ ಮಾತನಾಡಲು ಬರುವ, ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಇರುವ, ಹುಮ್ಮಸ್ಸು, ಉತ್ತಮ, ಅಂತರ್ವ್ಯಕ್ತಿತ್ವ, ಸಂವಹನ ಕೌಶಲ್ಯದ ಜತೆಗೆ ಸಂವಾದ ಕೌಶಲ್ಯ,ಸೇವಾ ಮನೋಭಾವ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ಹುದ್ದೆ ಸ್ಥಳ : ಮೈಸೂರು ಜಿಲ್ಲೆಯಲ್ಲಿ ಪ್ರಯಾಣಿಸುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 18 , 2021
ಹೆಚ್ಚಿನ ಮಾಹಿತಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ನಿರ್ದೇಶಕರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು : 0821-2444922, 9611069973