ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನೇಮಕ

Advertisements

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ಮಂಡ್ಯ ಜಿಲ್ಲೆ ಮಂಡ್ಯ ಇಲ್ಲಿನ ಅಧೀನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್ -19 ಸಾಂಕ್ರಾಮಿಕ ರೋಗದ ನಿರ್ವಹಣೆ ಸಮಯದಲ್ಲಿ ರಚಿಸಲಾದ 06 ಐಸಿಯು ಬೆಡ್ ಗಳನ್ನು ಕಾರ್ಯಗತಗೊಳಿಸಿ ನಿರ್ವಹಿಸಲು ಹೆಚ್ಚುವರಿ ಮಾನವ ಸಂಪನ್ಮೂಲವನ್ನು ದಿನಾಂಕ 30-09-2021 ರವರೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ವೈದ್ಯಕೀಯ / ಅರೆ ವೈದ್ಯಕೀಯ ‌ಸಿಬ್ಬಂದಿಗಳನ್ನು ಆಯ್ಕೆ ಮಾಡಲು ನೇರ ಸಂದರ್ಶನವನ್ನು ಹಮ್ಮಿಕೊಂಡಿದ್ದು, ಆಸಕ್ತರು ದಿನಾಂಕ 06-05-2021 ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 04-00 ಗಂಟೆಯ ಒಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕೊಠಡಿಯಲ್ಲಿ ನಡೆಯುವ ನೇರ ಸಂದರ್ಶನಕ್ಕೆ ಹಾಜರಾಗುವುದು.

ವೈದ್ಯಾಧಿಕಾರಿಗಳು ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ವೇತನ ರೂ.60,000/-. ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಶುಶ್ರೂಷಾಧಿಕಾರಿ ಹುದ್ದೆಗೆ ಜಿಎನ್ ಎಂ/ ಬಿಎಸ್ಸಿ ನರ್ಸಿಂಗ್ ಹೊಂದಿರಬೇಕು. ವೇತನ ರೂ.25,000/-

ಹೆಚ್ಚಿನ ಮಾಹಿತಿಗಾಗಿ 08232-224027 ಸಂಪರ್ಕಿಸಬಹುದು.

Leave a Comment