Advertisements
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಚೇರಿ, ರಾಮನಗರ ಜಿಲ್ಲೆಯಲ್ಲಿ ಖಾಲಿ ಇರುವ ಆರೋಗ್ಯ ಸಹಾಯಕಿಯರ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆರೋಗ್ಯ ಇಲಾಖಾ ವತಿಯಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ತರಬೇತಿ ಅವಧಿಯು 2 ವರ್ಷದ್ದಾಗಿರುತ್ತದೆ.
ಆಸಕ್ತ ಅಭ್ಯರ್ಥಿಗಳು ವೆಬ್ಸೈಟ್ ಮೂಲಕ ಅರ್ಜಿಯನ್ನು ಪಡೆದು ದ್ವಿಪ್ರತಿಯಲ್ಲಿ ದೃಢೀಕೃತ ಪ್ರತಿಗಳೊಂದಿಗೆ ದಿನಾಂಕ 10-12-2021 ರ ಸಂಜೆ 5.30 ಗಂಟೆಯೊಳಗೆ ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ರಾಮನಗರ ಜಿಲ್ಲೆ ಇವರಿಗೆ ಸಲ್ಲಿಸತಕ್ಕದ್ದು.
ವಿದ್ಯಾರ್ಹತೆ : ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ : ಪ್ರಸ್ತುತ ವರ್ಷದ ಡಿಸೆಂಬರ್ 31 ಕ್ಕೆ ಅಭ್ಯರ್ಥಿಯ ವಯಸ್ಸು ಕನಿಷ್ಠ 17 ವರ್ಷ ತುಂಬಿರಬೇಕು ಹಾಗೂ ಗರಿಷ್ಠ 30 ವರ್ಷಗಳು ಮೀರಬಾರದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ, ರಾಮನಗರ, ಇವರಿಂದ ಪಡೆಯಬಹುದಾಗಿದೆ. ದೂರವಾಣಿ ಸಂಖ್ಯೆ : 080-29576058